ಕಡಬ: ಮರ್ದಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪಾದಯಾತ್ರೆಯು ಅ.9ರಂದು ನಡೆಯಿತು.
ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಚಟುವಟಿಕೆಗಳು ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಮುಂದಿನ ಜೀರ್ಣೋದ್ಧಾರದ ಕಾಮಗಾರಿಯಲ್ಲಿ ಯಾವುದೇ ವಿಘ್ನಗಳು ಬಾರದೆ ಜೀರ್ಣೋದ್ಧಾರ ಯಶಸ್ವಿಯಾಗಿ ನಡೆಯಬೇಕೆಂಬ ಮಹಾಸಂಕಲ್ಪದೊಂದಿಗೆ ಪಾದಯಾತ್ರೆ ಕೈಗೊಳ್ಳಲಾಯಿತು.
ಪಾದಯಾತ್ರೆಗೆ ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಮರ್ದಾಳ ಬೀಡಿನ ಪ್ರಕಾಶ್ಚಂದ್ರ ರೈಯವರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಭಟ್ ಪಿಲಿಮಜಲು ಅವರಿಗೆ ಭಗವಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಡಬ ಶ್ರೀ ದುಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸೀತರಾಮ ಗೌಡ ಪೊಸವಳಿಕೆ, ಬೊಳ್ಳೂರು ಷಣ್ಮುಖ ಸುಬ್ರಾಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಮೇಶ್ ಭಟ್ ಕಲ್ಪುರೆ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ನಾರಾಯಣ ಶೆಟ್ಟಿ ಅತ್ಯಡ್ಕ, ಪೂವಪ್ಪ ಗೌಡ ಪೂಜಾರಿ ಮನೆ ಅಂತಿಬೆಟ್ಟು. ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಕೆ. ಬಸ್ತಿ, ಕೊಡೆಂಕಿರಿ, ಕಾರ್ಯದರ್ಶಿ ವಾಸುದೇವ ಬೈಪಾಡಿತ್ತಾಯ, ಸದಸ್ಯರಾದ ಮನೋಹರ ರೈ ಅಲಿಮಾರುಪಟ್ಟೆ, ಸತ್ಯನಾರಾಯಣ ಹೆಗ್ಡೆ ನಡುಮಜಲು, ಶ್ಯಾಮಪ್ರಸಾದ್ ರೈ ಪಣೆಬೈಲು, ಜೀರ್ಣೋದ್ದಾರ ಸಲಹಾ ಸಮಿತಿ ಅಧ್ಯಕ್ಷ ಹರೀಶ್ ಕೋಡಂದೂರು ಕಾರ್ಯದರ್ಶಿ ತಿರುಮಲೇಶ್ವರ ಗೌಡ ಕೊಲ್ಯ ಉಪಸ್ಥಿತರಿದ್ದರು.
ಪಾದಯಾತ್ರೆಯು ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಸಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಂಪನ್ನಗೊಂಡಿತು. ಪಾದಯಾತ್ರೆಯಲ್ಲಿ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಕುಣಿತ ಭಜನೆ ನಡೆಯಿತು. ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು. ಜೀರ್ಣೋದ್ಧಾರದ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಅಪಾರ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು