ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಮ್ಮಿಂಜೆ ವಲಯದ ಒಕ್ಕೂಟಗಳ ಪದಗ್ರಹಣ, ನೂತನ ಒಕ್ಕೂಟಗಳ ಉದ್ಘಾಟನೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು ತಾಲೂಕು ವ್ಯಾಪ್ತಿಯ ಕೆಮ್ಮಿಂಜೆ ವಲಯದ 4 ಒಕ್ಕೂಟಗಳ ಪದಗ್ರಹಣ ಮತ್ತು 2 ನೂತನ ಒಕ್ಕೂಟಗಳ ಉದ್ಘಾಟನಾ ಕಾರ್ಯಕ್ರಮ ನರಿಮೊಗರು ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ದೇವಸ್ಥಾನದ ಆಡಳಿತ ಕಮಿಟಿಯ ಮಾಜಿ ಅಧ್ಯಕ್ಷರಾದ ತಿರುಮಲೇಶ್ ಭಟ್ ಉದ್ಘಾಟಿಸಿದರು.

ನರಿಮೊಗರು ಗ್ರಾ.ಪಂ ಉಪಾಧ್ಯಕ್ಷ ಸುಧಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್‌ರವರು ಪದಗ್ರಹಣ ನೆರವೇರಿಸಿ ಜವಾಬ್ದಾರಿ ಹಸ್ತಾಂತರ ಮಾಡಿ ಒಕ್ಕೂಟಗಳ ಜವಾಬ್ದಾರಿ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಡಾ.ವಿಜಯ ಸರಸ್ವತಿರವರು ಮಹಿಳಾ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಚಿಂತಕ ಪರೀಕ್ಷಿತ್ ತೋಳ್ಪಾಡಿರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಯೋಜನಾಧಿಕಾರಿ ಆನಂದ್ ಸ್ವಾಗತಿಸಿದರು. ಚಿದಾನಂದ ವಂದಿಸಿದರು. ವಲಯ ಮೇಲ್ವಿಚಾರಕಿ ಮೋಹಿನಿ ಎಸ್ ಕೆಮ್ಮಿಂಜೆ ವಲಯದ ಸಾಧನಾ ವರದಿ ವಾಚಿಸಿದರು. ಪ್ರವೀಣ್‌ಕಾರ್ಯಕ್ರಮ ನಿರೂಪಿಸಿದರು. ಆರು ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here