ಕೋಡಿಂಬಾಡಿ ಗ್ರಾ.ಪಂ. 2ನೇ ವಾರ್ಡಲ್ಲಿ ಪ್ಲಾಸ್ಟಿಕ್ ಸಂಗ್ರಹ ಕಾರ್ಯಕ್ಕೆ ಚಾಲನೆ

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಗ್ರಾಮದ ಎರಡನೇ ವಾರ್ಡಿನಲ್ಲಿ ಹಳೆ ಪ್ಲಾಸ್ಟಿಕ್ ಸಂಗ್ರಹ ಕಾರ್ಯಕ್ಕೆ ಅ.13ರಂದು ಚಾಲನೆ ನೀಡಲಾಯಿತು.


ದಾರಂದಕುಕ್ಕು ಮತ್ತು ಸೇಡಿಯಾಪು ಕಾಲೋನಿಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರು ಅವರು ಸ್ವತಃ ಗ್ರಾಮ ಪಂಚಾಯತಿಯ ಘನ ತ್ಯಾಜ್ಯ ಸಂಗ್ರಹಣಾ ವಾಹನ ಚಲಾಯಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೆ, ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು. ಹದಿನೈದು ದಿನಗಳಿಗೊಮ್ಮೆ ಪ್ಲಾಸ್ಟಿಕ್ ಸಂಗ್ರಹಿಸುವ ಕಾರ್ಯ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿತಾಶ್ವ ಅವರು ಜಯಪ್ರಕಾಶ್ ಬದಿನಾರು ಅವರ ಸಮಾಜಮುಖಿ ಕಾರ್ಯಕ್ಕೆ ಕೈ ಜೋಡಿಸಿದ್ದರು.
ಕೋಡಿಂಬಾಡಿ ಗ್ರಾಮ‌ ಪಂಚಾಯತಿಗೆ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ‌ ಕೆಲವು ತಿಂಗಳ ಹಿಂದೆ ಘನತ್ಯಾಜ್ಯ ಸಂಗ್ರಹಣಾ ವಾಹನವನ್ನು ಕೊಡ ಮಾಡಲಾಗಿತ್ತು.

LEAVE A REPLY

Please enter your comment!
Please enter your name here