ಪುತ್ತೂರು:ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿ ಶಾಲಾ ಶಿಕ್ಷಕರಿಗೆ “ಪರಿಣಾಮಕಾರಿ ಬೋಧನೆ ಮತ್ತು ರಾಷ್ಟ್ರೀಯ ಶಿಕ್ಷಣನೀತಿ -2022” ವಿಷಯದ ಕುರಿತು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವು ಅ.12ರಂದು ನಡೆಯಿತು.
ಕಾರ್ಯಾಗಾರವನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಎಸ್.ಆರ್ ಉದ್ಘಾಟಿಸಿ, ಮಾತನಾಡುತ್ತಾ ಶಿಕ್ಷಕರಾದವರು ಹೆಚ್ಚಿನ ಪುಸ್ತಕಗಳನ್ನು ಓದಿ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸುವುದರೊಂದಿಗೆ ರಾಷ್ಟ್ರ ಕಟ್ಟುವಲ್ಲಿ ಜವಾಬ್ದಾರಿಯುತ ಪಾತ್ರವನ್ನು ವಹಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿ ಕೋಶಾಧಿಕಾರಿ ಕೃಷ್ಣಮೋಹನ್ ಮಾತನಾಡಿ ಪ್ರಜ್ಞಾವಂತ ಸುಸಂಸ್ಕೃತ ಮಕ್ಕಳನ್ನು ದೇಶಕ್ಕೆ ಕೊಡುಗೆಯಾಗಿ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದರು.
ನಿವೃತ್ತ ಪ್ರಾಧ್ಯಾಪಕರು, ಮಾನವ ಸಂಪದಭಿವೃದ್ಧಿ ಪ್ರಶಿಕ್ಷಣ ಪರಿಣತರೂ, ಅಭಿಯಾನಂ ಸಂಸ್ಥೆಯ ನಿರ್ದೇಶಕರೂ ಆಗಿರುವ ಡಾ.ಶಿಕಾರಿಪುರ ಕೃಷ್ಣಮೂರ್ತಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. “ಪರಿಣಾಮಕಾರಿ ಬೋಧನೆ, ತರಗತಿ ನಿರ್ವಹಣೆ, ಸೂಕ್ತ ಕಲಿಕಾ ಚಟುವಟಿಕೆಗಳು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ-2022: ವಿಷಯದ ಕುರಿತು ಶಿಕ್ಷಕರಿಗೆ ಸಂಪೂರ್ಣ ಮಾಹಿತಿಯನ್ನು ಬಹಳ ಪರಿಣಾಮಕಾರಿಯಾಗಿ ನೀಡಿದರು.
ಯೋಗ ಶಿಕ್ಷಕಿ ಶರಾವತಿ ಶಿಕ್ಷಣದಲ್ಲಿ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಜ್ಯೋತಿಲಕ್ಷ್ಮೀ ಪ್ರಾರ್ಥಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಸ್ವಾಗತಿಸಿದರು. ಶಿಕ್ಷಕಿ ರಮ್ಯ ವಂದಿಸಿ, ಶಿಕ್ಷಕಿಯರಾದ ಸೌಮ್ಯ ಕುಮಾರಿ ಮತ್ತು