ಶಾಲಾ ಪ್ರವೇಶಕ್ಕೆ 6 ವರ್ಷ; 2024-25ಕ್ಕೆ ಜಾರಿ- ಬಿ.ಸಿ.ನಾಗೇಶ್

0

ಬೆಂಗಳೂರು:ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗವಿಗೆ 6 ವರ್ಷಗಳು ಪೂರ್ಣಗೊಂಡಿರಬೇಕು.ಈ ನಿಯಮವನ್ನು 2024-25ರಿಂದ ಜಾರಿಗೊಳಿಸುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಶಾಲಾ ಶಿಕ್ಷಣಕ್ಕೆ ಮಗು ಪ್ರವೇಶ ಪಡೆಯಲು 6 ವರ್ಷಗಳು ಪೂರ್ಣಗೊಂಡಿರುವುದು ಕಡ್ಡಾಯ. ಶಿಕ್ಷಣ ತಜ್ಞರ ಸಲಹೆಯೂ ಅದೇ ಆಗಿದೆ. 23 ರಾಜ್ಯಗಳು ಈಗಾಗಲೇ ಈ ನಿಯಮ ಅಳವಡಿಸಿಕೊಂಡಿವೆ. ರಾಜ್ಯದಲ್ಲೂ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಈ ನಿಯಮ ಅಳವಡಿಸಿಕೊಳ್ಳಲಾಗುವುದು. ಆ ಮಕ್ಕಳು ಎರಡು ವರ್ಷಗಳ ನಂತರ (2025-26) ಒಂದನೇ ತರಗತಿಗೆ ಪ್ರವೇಶ ಪಡೆಯಲು ಅನುಕೂಲವಾಗುತ್ತದೆ ಎಂದರು. ಕೋವಿಡ್ ನಂತರದ ದಿನಗಳಲ್ಲಿ ಬಹಳಷ್ಟು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಅವರ ಕಲಿಕಾಮಟ್ಟ ಮೌಲ್ಯಮಾಪನ ಮಾಡಲು, ಕಲಿಕೆಯ ಸಾಮರ್ಥ್ಯ ವೃದ್ಧಿಸಲು 5 ಮತ್ತು 8ನೇ ತರಗತಿಯಲ್ಲಿ ಸಾಮಾನ್ಯ ಪರೀಕ್ಷೆ ನಡೆಸುವ ಚಿಂತನೆ ಇದೆ. ಈ ಕುರಿತು ಸಭೆ ಕರೆಯಲಾಗಿದೆ. ಚರ್ಚೆಯ ನಂತರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ನಾಗೇಶ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here