ಪುತ್ತೂರು: ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಉದ್ಘಾಟನೆಯು ಅ.16ರಂದು ಇಲ್ಲಿನ ಅನುರಾಗ ವಠಾರದಲ್ಲಿ ಜರುಗಲಿದೆ.
ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎಂ. ಅವರು ನೂತನ ಸಂಘವನ್ನು ಉದ್ಘಾಟಿಸಲಿದ್ದು, ಕರ್ನಾಟಕ ಕಾರ್ಮಿಕ ಸಂಘಗಳ ಒಕ್ಕೂಟದ ಅಧ್ಯಕ್ಷರು ಮತ್ತು ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಬಿ.ಪುರಂದರ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಹರಿಪ್ರಸಾದ್ ಪಿ.ಕೆ, ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಗೌರವ ಸಲಹೆಗಾರ ಎಂ.ಶೇಷಪ್ಪ ಕುಲಾಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಜಯರಾಮ ಕುಲಾಲ್ ಅವರು ತಿಳಿಸಿದ್ದಾರೆ.