ಪುತ್ತೂರು : ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯರವರು ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ ಶಾಲಾ ವಿಭಾಗದ ಸಭಾಭವನದಲ್ಲಿ ಅ.15ರಂದು ಬೆಳಿಗ್ಗೆ 10ರಿಂದ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್‌ರವರು ಕಂದಾಯ ಇಲಾಖೆ ಮತ್ತು ಇತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಅರ್ಹ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಿದ್ದಾರೆ. ಕೆಯ್ಯೂರು ಗ್ರಾಮದ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆಯಲು ತಹಶೀಲ್ದಾರ್ ತಿಳಿಸಿದ್ದಾರೆ.