ರಾಷ್ಟ್ರೀಯ ಅತ್ಲೆಟಿಕ್ ಕ್ರೀಡಾಕೂಟಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ಆಯ್ಕೆ

0

ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. 61ನೇ ಮುಕ್ತ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅ.15 ರಿಂದ 19ರವರೆಗೆ ನಡೆಯುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಾರೆ. ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಇವರು ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here