ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ” ಕೋಟಿ ಚೆನ್ನಯ ಬಸ್ ನಿಲ್ದಾಣ” ನಾಮಕರಣ

0

ಪುತ್ತೂರು: ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಇನ್ಮುಂದೆ ಕಾರಣಿಕ ಶಕ್ತಿ ಅವಳಿ ವೀರಪುತ್ರರ ಹೆಸರಿನಲ್ಲಿ “ಕೋಟಿ-ಚೆನ್ನಯ* ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ.

 

ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ನಿಲ್ದಾಣಕ್ಕೆ ‘ಕೋಟಿ ಚೆನ್ನಯ್ಯ ಬಸ್‌ ನಿಲ್ದಾಣ’ ಎಂದು ನಾಮಕರಣ ಮಾಡುವ ಕುರಿತು ಪುತ್ತೂರು ನಗರ ಸಭೆ, ದಕ್ಷಿಣ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಕ.ರಾ.ರ.ಸಾ.ನಿಗಮದ ನಿರ್ದೇಶಕ ಮಂಡಳಿಯಲ್ಲಿ ಅನುಮೋದನೆ ನೀಡಿರುವ ದಾಖಲೆಗಳನ್ನು ಸಲ್ಲಿಸಿ, ಸದರಿ ಪ್ರಸ್ತಾವನೆಗೆ ಪೂರ್ವಾನುಮೋದನೆ ನೀಡುವಂತೆ ಕೋರಿದ್ದರು. ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ನಿಲ್ದಾಣಕ್ಕೆ “ಕೋಟಿ ಚೆನ್ನಯ್ಯ ಬಸ್‌ ನಿಲ್ದಾಣ’ ಎಂದು ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here