ಸಂಪ್ಯ ಬಿಎಮ್‌ಎಸ್ ಆಟೋ ರಿಕ್ಷಾ ಚಾಲಕರ, ಮಾಲಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ನಾಯಕ್ ನಿಧನ

0

ಪುತ್ತೂರು: ಬಿಎಮ್‌ಎಸ್ ಆಟೋ ರಿಕ್ಷಾ ಚಾಲಕರ, ಮಾಲಕರ ಸಂಘ ಸಂಪ್ಯ ಘಟಕದ ಮಾಜಿ ಅಧ್ಯಕ್ಷ ಉಮೇಶ್ ನಾಯಕ್(40ವ)ರವರು ಅ.14ರಂದು ತಡ ರಾತ್ರಿ ನಿಧನಾದರು.

ಕುರಿಯ ದಿ.ಆನಂದ್ ನಾಯಕ್ ಅವರ ಪುತ್ರ ಉಮೇಶ್ ನಾಯಕ್ ಅವರು ಆಟೋ ರಿಕ್ಷಾ ಚಾಲಕರಾಗಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ ಪ್ರತಿಮಾ, ಪುತ್ರ ಹಾಗೂ ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಬಿಎಂಎಸ್ ತಾಲೂಕು ಸಂಘದಿಂದ ಉಮೇಶ್ ನಾಯಕ್ ಅವರಿಗೆ ಸಂತಾಪ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here