ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗಿ

0

ಪುತ್ತೂರು; ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧೀ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಅ.15ರಂದು ಬಳ್ಳಾರಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು ಭಾಗವಹಿಸಿ, ಅಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಜೊತೆಗೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಷಣ್ ರೈ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ, ಮಂಜುನಾಥ ಗೌಡ ಮೊದಲಾದವರು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

LEAVE A REPLY

Please enter your comment!
Please enter your name here