ಬೆಳಂದೂರು ಗ್ರಾ.ಪಂ, ವ್ಯಾಪ್ತಿಯಲ್ಲಿ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ಮತ್ತು ಪಶು ಸಂಗೋಪನಾ ಇಲಾಖೆ ಕಡಬ ಇದರ ವತಿಯಿಂದ ಹುಚ್ಚು ನಾಯಿಗಳಿಗೆ ರೋಗ ನಿರೋಧಕ ಉಚಿತ ಲಸಿಕಾ ಶಿಬಿರವು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳಂದೂರು ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್, ಕಡಬ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ. ಅಜಿತ್, ಗ್ರಾ.ಪಂ.ಸದಸ್ಯರಾದ ಜಯಂತ ಅಬೀರ, ಪ್ರವೀಣ್ ಕೆರನಾರು, ಜಯರಾಮ ಬೆಳಂದೂರು, ಉಮೇಶ್ವರಿ ಅಗಳಿ ಮತ್ತೀತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here