ಪುತ್ತೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆದ SGFI ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ಬಾಲವನದ ಅಕ್ವಾಟಿಕ್ ಕ್ಲಬ್ ಈಜುಗಾರರು 21 ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿಎಸಿನ ಈಜುಗಾರರು ರಾಜ್ಯಮಟ್ಟದ ಸ್ಪರ್ಧೆ ಕೂಟದಲ್ಲಿ 7 ಚಿನ್ನದ ಪದಕ, 6ಬೆಳ್ಳಿ ಮತ್ತು 8ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವಿವಿಧ ಶಾಲೆಗಳನ್ನು ಪ್ರತಿನಿಧಿಸುವ ಪುತ್ತೂರಿನ PACಯ 15 ಈಜುಗಾರರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಮತ್ತು 6 ಈಜುಗಾರರು ಈ ವರ್ಷದ ಕೊನೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ.
ಬೆಥನಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ತನ್ನ ಚೊಚ್ಚಲ ರಾಜ್ಯಮಟ್ಟದ ಸ್ಪರ್ಧೆಯಲ್ಲಿ 5 ಪದಕಗಳನ್ನು ಗೆಲ್ಲುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು. 50,100 ಮತ್ತು 200 ಮೀಟರ್‌ಗಳ ಬ್ರೆಸ್ಟ್ಸ್ಟ್ರೋಕ್‌ನಲ್ಲಿ 3 ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದರು.4*100 ಮೀಟರ್ಸ್ ಮೆಡ್ಲೆ ರಿಲೇಯಲ್ಲಿ 1 ಬೆಳ್ಳಿ ಪದಕ ಮತ್ತು 4*100 ಫ್ರೀಸ್ಟೈಲ್ ರಿಲೇಯಲ್ಲಿ 1 ಕಂಚು ಗೆದ್ದಿದ್ದಾರೆ.
ಸೈಂಟ್ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಲಿಖಿತ್ ರಾಮಚಂದ್ರ 200 ಮೀಟರ್ಸ್ ವೈಯಕ್ತಿಕ ಮೆಡ್ಲೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. ಅವರು 100 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ 1 ಕಂಚಿನ ಪದಕವನ್ನು ಗೆದ್ದರು ಮತ್ತು 4*100 ಮೀಟರ್ಸ್ ಫ್ರೀಸ್ಟೈಲ್ ರಿಲೇ ಮತ್ತು 4*100 ವೈಯಕ್ತಿಕ ಮೆಡ್ಲೆ ರಿಲೇಯಲ್ಲಿ 2 ಬೆಳ್ಳಿ ಪದಕ ಗೆದ್ದಿದ್ದಾರೆ.
ನರಿಮೊಗರು ಸಾಂದೀಪನಿ ಗ್ರಾಮೀಣ ಶಿಕ್ಷಣ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಅಮನರಾಜ್ 50 ಮೀಟರ್ ಬ್ಯಾಕ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ.
ಸುದಾನ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿಕೋಲಸ್ ರೋನಿನ್ ಮಥಾಯಿಸ್ 50 ಮತ್ತು 100 ಮೀಟರ್ಸ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ 2 ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರೀಯ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಅವರು 4*100 ಮೀಟರ್ಸ್ ಫ್ರೀಸ್ಟೈಲ್ ರಿಲೇ ಮತ್ತು 4*100 ಮೀಟರ್ಸ್ ಮೆಡ್ಲೆ ರಿಲೇಯಲ್ಲಿ 2 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.
ಸುದಾನ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ನಂದನ್ ಎಸ್ ನಾಯ್ಕ್ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ 1 ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. 200 ಮೀಟರ್ಸ್ ಬ್ರೆಸ್ಟ್ಸ್ಟ್ರೋಕ್‌ನಲ್ಲಿ 1 ಕಂಚಿನ ಪದಕ ಗೆದ್ದಿದ್ದಾರೆ.
ಬೆಥನಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಪ್ರಾಧಿ ಕ್ಲೇರ್ ಪಿಂಟೊ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ 1 ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. 200 ಮೀಟರ್ ಬ್ಯಾಕ್‌ಸ್ಟ್ರೋಕ್ ಮತ್ತು 4*100 ಫ್ರೀಸ್ಟೈಲ್‌ನಲ್ಲಿ ಕಂಚು ಮತ್ತು 4×100 ಮೀಟರ್ ವೈಯಕ್ತಿಕ ಮೆಡ್ಲೆ ರಿಲೇಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನ್ವಿತ್ 4*100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲಿ 1 ಚಿನ್ನದ ಪದಕ ಹಾಗೂ 100 ಮೀಟರ್ ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಸುದಾನ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅನಿಕೇತ್ 200 ಮೀಟರ್ಸ್ ವೈಯಕ್ತಿಕ ಮೆಡ್ಲೆ ಮತ್ತು 400 ಮೀಟರ್ಸ್ ವೈಯಕ್ತಿಕ ಮೆಡ್ಲೆ ರಿಲೇಯಲ್ಲಿ 2 ಕಂಚಿನ ಪದಕ ಗೆದ್ದಿದ್ದಾರೆ.
ಸುದಾನ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನಿಕಾ 200 ಮೀಟರ್ಸ್ ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಅನ್ವಿತ್ ರೈ ಬಾರಿಕೆ, ಚರಿತ್, ಪ್ರತೀಕ್ಷಾ ಆಳ್ವ, ಮಾಹಿನ್ ಜೋಯಲ್ ಡಿ. ಸೋಜಾ, ಮಾನ್ವಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ಈ ಎಲ್ಲಾ ಈಜುಪಟುಗಳಿಗೆ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನ ಈಜುಕೊಳ ಮತ್ತು ಮಂಗಳೂರಿನ ಸೇಂಟ್ ಅಲೋಶಿಯಸ್ ಈಜುಕೊಳದಲ್ಲಿ ಕೋಚ್ ಪಾರ್ಥ ವಾರಣಾಶಿ, ನಿರೂಪ್, ರೋಹಿತ್ ಮತ್ತು ದೀಕ್ಷಿತ್ ತರಬೇತಿ ನೀಡಿದ್ದಾರೆ.