ಪೆರಾಬೆ ನಿವಾಸಿ ಕುದ್ದುಪದವಿನಲ್ಲಿ ನೇಣುಬಿಗಿದು ಆತ್ಮಹತ್ಯೆ

0

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.16 ರಂದು ವಿಟ್ಲದ ಕುದ್ದುಪದವು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮೂಲತಃ ಕಡಬ ತಾಲೂಕು ಪೆರಾಬೆ ಗ್ರಾಮದ ಸುರುಳಿಮನೆ ಕೇಶವ ಆಚಾರ್ಯ (48) ರವರು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಕೇಶವರವರು ವಿಟ್ಲದ ಕುದ್ದುಪದವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಸಂಬಂಽಕರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here