ಜಿಲ್ಲಾ ಮಟ್ಟದ ದಸರಾ ಯೋಗ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿಯ ಶ್ರೀಮಾ ಪ್ರಥಮ, ಮೋನಿಷ್ ತೃತೀಯ

0

ಕಾಣಿಯೂರು: ಆವಿಷ್ಕಾರ್ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಮಂಗಳೂರು ಇದರ ವತಿಯಿಂದ ದಸರಾ ಯೋಗ -2022 ಪ್ರಯುಕ್ತ ಅ 16ರಂದು ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 11 ರಿಂದ 16ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಶ್ರೀಮಾ ಕೆ. ಎಚ್ ರವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಸುಳ್ಯ ತಾಲೂಕು ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತಾ ಕೆ ರವರ ಪುತ್ರಿ. 11 ರಿಂದ 16ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಪ್ರಗತಿ ವಿದ್ಯಾಸಂಸ್ಥೆಯ ಮೋನಿಷ್. ಟಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ವಿಶ್ವನಾಥ ಟಿ ದಯಾಮಣಿ ದಂಪತಿ ಪುತ್ರ. ಇವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಯೋಗ ಹಾಗೂ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here