ಈಶ್ವರಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ತಾಲೂಕು ಪಂಚಾಯತ್ ಪುತ್ತೂರು ಇದರ ಸಹಯೋಗದೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕಾರ್ಯಗಾರವು ಅ.18 ರಂದು ಈಶ್ವರಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನದಲ್ಲಿ ನಡೆಯಲಿದೆ.
ಪುತ್ತೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಶೈಲಜಾ ಪ್ರಕಾಶ್ ಇವರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.