ಕುಂಟಾರು ರವೀಶ ತಂತ್ರಿಯವರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿವರ್ಯರು ಹಾಗು ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಬ್ರಹ್ಮಶ್ರೀ ವೇ ಮೂ ರವೀಶ ತಂತ್ರಿಯವರು ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರು ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಖ್ಯಾತ ವೈದ್ಯ ಡಾ. ಎಂ.ಕೆ.ಪ್ರಸಾದ್ ಅವರನ್ನು ಭೇಟಿಯಾದ ವೇಳೆ ವೈದ್ಯರು ಪರೀಕ್ಷೆ ನಡೆಸಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ತಿಳಿದು ಬಂದಿದೆ. 

LEAVE A REPLY

Please enter your comment!
Please enter your name here