ನೇರಳಕಟ್ಟೆ: ಚಲಿಸುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದ ವ್ಯಕ್ತಿಯ ಗುರುತು ಪತ್ತೆ

0

ಪುತ್ತೂರು: ನೇರಳಕಟ್ಟೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು ಅ.16ರಂದು ರೈಲಿನಡಿಗೆ  ಬಿದ್ದು ಮೃತಪಟ್ಟಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತರನ್ನು ಮಧ್ಯಪ್ರದೇಶದ ಜಗನ್ನಾಥ್‌ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ ಆಕಸ್ಮೀಕವಾಗಿ ಬಂದು ರೈಲಿನಡಿಗೆ ಬಿದ್ದಿದ್ದರು. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಾಗ ದಾರಿ ಮಧ್ಯೆ ಮೃತಪಟ್ಟಿದ್ದರು. 

ನೇರಳಕಟ್ಟೆ: ಚಲಿಸುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ಬಿದ್ದು ವ್ಯಕ್ತಿ ತೀವ್ರ ಗಾಯ – ಆಸ್ಪತ್ರೆಗೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತರುವಾಗ ದಾರಿ ಮಧ್ಯೆ ಮೃತ್ಯು !

LEAVE A REPLY

Please enter your comment!
Please enter your name here