ಪುತ್ತೂರು: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಮೃತ ದೇಹ ದರ್ಬೆಯಲ್ಲಿರುವ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅ.18 ರ ತಡ ರಾತ್ರಿ ಪತ್ತೆಯಾಗಿದೆ.
ಬೆಂಗಳೂರು ಮೂಲದ ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟವರಾಗಿದ್ದು, ಅವರು ಅ.16 ಕ್ಕೆ ಪುತ್ತೂರಿಗೆ ಬಂದು ಲಾಡ್ಜ್ ನಲ್ಲಿ ರೂಮ್ ಮಾಡಿದ್ದರು. ಅ.18 ರ ತಡ ರಾತ್ರಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆ ಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರ ಗುರುತು ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.