ಪುತ್ತೂರು:ಸರ್ವೋಚ್ಚ ನ್ಯಾಯಾಲಯವು ಅನುಮತಿಸಿರುವ ಹಸಿರು ಪಟಾಕಿ ಕುರಿತು ಸರಕಾರದ ಆದೇಶವನ್ನು ಪಾಲಿಸಿಕೊಂಡು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ನೀಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ತಿಳಿಸಿದ್ದಾರೆ.
ಪಟಾಕಿ ಮತ್ತು ಸ್ಪೋಟಕ ವಸ್ತುಗಳ ಬಳಕೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ರಿಟ್ ಪಿಟಿಷನ್(ಸಿ)ನಂ.728/2015ದಲ್ಲಿ ದಿನಾಂಕ 23-10-2018 ಹಾಗು ತದನಂತರ ಹಲವಾರು ನಿರ್ದೇಶನಗಳನ್ನು ನೀಡಿದೆ. ರಾತ್ರಿ ಗಂಟೆ 8ರಿಂದ 10 ಗಂಟೆಯ ತನಕ ಮಾತ್ರ ಪಟಾಕಿ ಸ್ಪೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಽಸಿದೆ.ಇದರ ಜೊತೆಗೆ ಸರ್ವೋಚ್ಚ ನ್ಯಾಯಾಲಯವು ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಽಸಿದೆ.ಹಸಿರು ಪಟಾಕಿ ಕುರಿತು ಸರಕಾರದ ಆದೇಶ (ಸಂಖ್ಯೆ ಆರ್‌ಡಿ 465 ಟಿ ಎನ್ ಆರ್ 2020 ದಿನಾಂಕ 12-11-2020)ದಲ್ಲಿ ವಿವರಣೆ ನೀಡಿದೆ.ಸದ್ರಿ ಆದೇಶ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ನಿರ್ದೇಶನಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.ಆದುದರಿಂದ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪುತ್ತೂರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ತಿಳಿಸಿದ್ದಾರೆ.