ಚರ್ಮಗಂಟು ರೋಗದ ಹಿನ್ನೆಲೆ : ಜಾನುವಾರುಗಳ ಸಾಗಾಟ ತಾತ್ಕಾಲಿಕ ನಿಷೇಧ

0

ಮಂಗಳೂರು:ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಕಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.

ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.

LEAVE A REPLY

Please enter your comment!
Please enter your name here