ಬಂಟ್ವಾಳದ ಮಣಿಹಳ್ಳದಲ್ಲಿ ಬಸ್ಸು – ಎರಡು ಕಾರುಗಳ ನಡುವೆ ಅಪಘಾತ – ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಸಹಿತ ಐವರಿಗೆ ಗಾಯ

0

ವಿಟ್ಲ: ಎರಡು ಕಾರು ಹಾಗೂ ಒಂದು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಐವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳದಲ್ಲಿ ನಡೆದಿದ್ದು, ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ತೆರಳುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ವಿಟ್ಲದ ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ರವರ ಕಾರುಗಳ ನಡುವೆ ಈ ಭೀಕರ ಅಪಘಾತ ನಡೆದಿದೆ. ಬಳಿಕ ಹಿಂಬದಿಯಿಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ.

‌ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಪ್ರವೀಣ್ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು.

112 ಹೊಯ್ಸಳ ಪೋಲೀಸ್ ವಾಹನ ಚಾಲಕ ವಿಶ್ವನಾಥ ಅವರು ಗಾಯಳು ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here