ವಿವೇಕಾನಂದ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

0

ಪುತ್ತೂರು: ಬದಲಾದ ಕಾಲಘಟ್ಟಕ್ಕೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ತಾಂತ್ರಿಕವಾಗಿ ಹಲವಾರು ಹೊಸತನಗಳನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕೆಲಸಗಳು ನಡೆಯುತ್ತಿರುವುದು ಕಂಪ್ಯೂಟರ್ ಮೂಲಕವೇ. ಹಾಗಾಗಿ ಶಿಕ್ಷಣದ ಜೊತೆ ಜೊತೆಗೆ ನಾವು ತಾಂತ್ರಿಕವಾಗಿಯೂ ಬೆಳೆಯಬೇಕಾದ ಅನಿವಾರ್‍ಯತೆಯಿದೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್‍ಯದರ್ಶಿ ಡಾ.ಕೃಷ್ಣ ಭಟ್ ಕೆ.ಎಂ ಹೇಳಿದರು.
ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ(ಸ್ವಾಯತ್ತ) ಬಿಸಿಎ ವಿಭಾಗದ ಹೊಸ ಕಂಪ್ಯೂಟರ್ ಲ್ಯಾಬ್ ನ್ನು ಉದ್ಘಾಟಿಸಿ ಮಾತಾನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಸೌಲಭ್ಯಗಳನ್ನು ಒದಗಿಸಿಕೊಡುವಾಗ ವಿದ್ಯಾರ್ಥಿಗಳು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತಾನಾಡಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಮಾತನಾಡಿ, ನಾವು ಆಧುನೀಕತೆಗೆ ಒಗ್ಗಿಕೊಳ್ಳಬೇಕಾಗಿದೆ. ಹೊಸ ಹೊಸ ತಂತ್ರಜ್ಞಾನಗಳು ಬಂದಂತೆ ನಾವು ಕಲಿತುಕೊಳ್ಳಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಶಿವಪ್ರಸಾದ್ ಇ, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳೀಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ.ಶ್ರೀಧರ, ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು.
ಬಿಸಿಎ ವಿಭಾಗದ ಮುಖ್ಯಸ್ಥ ಪಿ.ಪ್ರಕಾಶ್ ಕುಮಾರವ ಸ್ವಾಗತಿಸಿ, ಉಪನ್ಯಾಸಕ ಸೂರ್‍ಯ ನಾರಾಯಣ ವಂದಿಸಿದರು. ಬಿಸಿಎ ವಿಭಾಗದ ಉಪನ್ಯಾಸಕಿ ಸುಚಿತ್ರಾ ಶರ್ಮ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here