ಕನ್ಯಾನ: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ-ಓರ್ವ ಗಂಭೀರ

0

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಮೀಪದ ಬಂಡಿತ್ತಡ್ಕ ಮಸೀದಿ ಮುಂಭಾಗದಲ್ಲಿ ಅ.21ರಂದು ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಬೈಕ್ ಮತ್ತು ಆಕ್ಟಿವಾ ನಡುವೆ ಈ ಅಪಘಾತ ಸಂಭಸಿದ್ದು, ಸವಾರರಿಬ್ಬರು ಗಾಯಗೊಂಡಿದ್ದಾರೆ. ಇಬ್ಬರ ಪೈಕಿ ಓರ್ವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here