ಕನ್ಯಾನ: ನೇಣುಬಿಗಿದು ಯುವಕ ಆತ್ಮಹತ್ಯೆ

0

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.22 ರಂದು ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ.

ಕನ್ಯಾನ ನಿವಾಸಿ ಯೋಗಿಶ್ (34 ವ.) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಯೋಗಿಶ್ ರವರು ಕನ್ಯಾನದ ವೈನ್ ಶಾಪ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ.

ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಅ.22ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು‌ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here