ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ: ಮೂವರು ವಶಕ್ಕೆ

0

ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ಮೂವರನ್ನು ಬಂಧಿಸಿ ಅವರಿಂದ ಮೊಬೈಲ್ ಮತ್ತು ವಾಹನವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.

ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಸಿನಾನ್ ಯು. ಮತ್ತು ಮಹಮ್ಮದ್ ಅಫೀಲ್ ಎಂಬಿಬ್ಬರು ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುವ ರೀತಿಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಕೃತ್ಯವನ್ನು ಕಂಡು ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಆರೋಪಿಗಳ ವಶದಲ್ಲಿದ್ದ ಮೂರು ಮೊಬೈಲ್‌ಗಳನ್ನು ಸ್ವಾಧೀನಪಡಿಸಿಕೊಂಡ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ 34 ನೇ ನೆಕ್ಕಿಲಾಡಿ ಗ್ರಾಮದ ಹಳೇ ಸೇತುವೆಯಲ್ಲಿ ಅಬ್ದುಲ್ ಅಜೀಜ್ ಎಂಬಾತ ಮಾರುತಿ ಸುಜುಕಿ ಅಲ್ಟೋ ಕಾರನ್ನು ಇರಿಸಿಕೊಂಡು ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರೊಡನೆ ಅನುಚಿತವಾಗಿ ವರ್ತಿಸುತ್ತಿದ್ದ ಕೃತ್ಯವನ್ನು ಕಂಡು ಆರೋಪಿಯನ್ನು ಕಾರು ಸಹಿತ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯ ಬಳಿ ಇದ್ದ ಎರಡು ಮೊಬೈಲ್ ಪೋನನ್ನು ಸ್ವಾಽನ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here