ಪುತ್ತೂರಿನಲ್ಲಿ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಾರಂಭ

0

  • ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಪ್ರತಿಮೆಯೊಂದಿಗೆ ಸಾಗಿದ ಭವ್ಯ ಮೆರವಣಿಗೆ
  • ತೆರೆದ ವಾಹನಲ್ಲಿ ಡಾ| ಎಂ.ಎನ್.ರಾಜೇಂದ್ರ ಕುಮಾರ್, ಕೆ.ಜೀವಂಧರ್ ಜೈನ್ ಅವರಿಗೆ ಸ್ವಾಗತ
  • 3 ಕೆ.ಜಿ ತೂಕದ ಬೆಳ್ಳಿ ಕಿರೀಟ ತೊಡಿಸಿ ಗೌರವ

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ 2ನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಸಹಕಾರ ರತ್ನ ‘ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿ ಪುತ್ತೂರು ಇದರ ವತಿಯಿಂದ ಪುತ್ತೂರು, ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳ ಸಮಸ್ತ ಸಹಕಾರಿ ಬಂಧುಗಳಿಂದ ಗೌರವ ಸಮರ್ಪಣೆ ಕಾರ್ಯಕ್ರಮ ಅ.24ರಂದು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.

ಅಭಿನಂದನಾ ಸಮಾರಂಭಕ್ಕೂ ಮುಂದೆ ಬೆಳಿಗ್ಗೆ ದರ್ಬೆಯಿಂದ ಬಂಟರ ಭವನದ ತನಕ ವೈಭವದ ಮೆರವಣಿಗೆ ನಡೆಯಿತು.


ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿದರು.


ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರು ಅಭಿನಂದನಾ ಭಾಷಣ ಮಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಐಖಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಸಹಕಾರ ಯೂನಿಯನ್ ಅಧ್ಯಕ್ಷ ಪ್ರಸಾದ್‌ಕೌಶಲ್ ಶೆಟ್ಟಿ, ಅಭಿನಂದನಾ ಸಮಿತಿ ಸಂಚಾಲಕರಾದ ನಿರಂಜನ್ ಬಾವಂತಬೆಟ್ಟು ಮತ್ತು ಎಸ್.ಬಿ ಜಯರಾಮ ರೈ, ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಕ್ಯಾಡ್ಸ್‌ನ ಅಧ್ಯಕ್ಷ ರವೀಂದ್ರ ಕಂಬಳಿ, ಕೇಂದ್ರ ಸಹಕಾರಿ ಬ್ಯಾಂಕ್‌ನ ವ್ಯವಸ್ಥಾಪಕ ಗೋಪಾಲಕೃಷ್ಣ ಭಟ್, ನಿರ್ದೇಶಕ ಭಾಸ್ಕರ್ ಕೋಟ್ಯಾನ್, ಸಹಕಾರಿ ಸಂಘದ ಪ್ರಬಂಧಕ ತ್ರಿವೇಣಿ, ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ರಾಜಶೇಖರ್ ಜೈನ್, ದ.ಕ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕ ನಾರಾಯಣ ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ:
ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ಸನ್ಮಾನ ಪೀಠದಲ್ಲಿ ಆಸೀನರಾಗಿಸಿ ಸನ್ಮಾನ ಪತ್ರ ಮಂಡಿಸಿದ ಬಳಿಕ ಅವರನ್ನು ಗಣ್ಯರು ಸನ್ಮಾನಿಸಿದರು. ಕೆಂಪು ಗುಲಾಬಿಯ ಬೃಹತ್ ಮಾಲೆಯನ್ನು, 3 ಕೆ.ಜಿ ತೂಕದ ಬೆಳ್ಳಿ ಕಿರೀಟ ತೊಡಿಸಿ, ಬೆಳ್ಳಿಯ ಗಣಪತಿ ವಿಗ್ರಹ, ಇದರ ಜೊತೆಗೆ 5 ಅಡಿ 6 ಇಂಚು ಎತ್ತರದ ಸನ್ಮಾನ ಪತ್ರದ ಫಲಕ, ಬೆತ್ತದ ಬುಟ್ಟಿಯಲ್ಲಿ ತುಂಬಾ ಫಲವಸ್ತುಗಳು, ಮಹಾಲಿಂಗೇಶ್ವರ ದೇವರ ಬ್ರಹ್ಮರಥ ಮತ್ತು ರಾಷ್ಟ್ರ ಲಾಂಛನದ ನಡುವೆ ಅವರ ಭಾವಚಿತ್ರವಿರುವ ಗಾಜಿನ ಫಲಕ ವನ್ನು ಅವರಿಗೆ ಅರ್ಪಣೆ ಮಾಡಲಾಯಿತು.

ಸವಣೂರು ಬ್ಯಾಂಕ್ ಸಿಇಒ ಚಂದ್ರಶೇಖರ್ ಸನ್ಮಾನ ಪತ್ರ ವಾಚಿಸಿದರು. ಬಳಿಕ ಶಾಸಕರ ನೇತೃತ್ವದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅವರ ನೇತೃತ್ವದಲ್ಲಿ ಹಾಗು ಸಹಕಾರ ಬಂಧುಗಳಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.


ಅದ್ದೂರಿಯ ಮೆರವಣಿಗೆ:
ದರ್ಬೆಯಲ್ಲಿ ಮೆರವಣಿಗೆಯನ್ನು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ತೆಂಗಿನ ಕಾಯಿ ಒಡೆದು, ಸಹಕಾರ ಸಂಘದ ಧ್ವಜವನ್ನು ಅಭಿನಂದನಾ ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ಕೊಂಚಾಡಿಯ ಚೆಂಡೆ, ನಾಸಿಕ್ ಬ್ಯಾಂಡ್‌ನ ಸದ್ದಿನೊಂದಿಗೆ ಸುಮಾರು 250ಕ್ಕೂ ಮಿಕ್ಕಿ ವಾಹನ ಜಾಥದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘ ಉದಯವಾಗಲು ಕಾರಣಕರ್ತರಾದ ಸಹಕಾರಿ ಪಿತಾಮಹಾ ಮೊಳಹಳ್ಳಿ ಶಿವರಾಯರವರ ಪ್ರತಿಮೆಯ ಜೊಯರ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಮತ್ತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರನ್ನು ತೆರೆದ ವಾಹನದಲ್ಲಿ ಸ್ವಾಗತಿಸಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ 66 ಕೃಷಿಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವತಿಯಿಂದ ಬ್ಯಾನರ್ ಅಳವಡಿಸಿ ಸ್ವಾಗತಿಸಲಾಗಿತ್ತು.

ಅಭಿನಂದನಾ ಸಮಿತಿ ಸಂಚಾಲಕ ಎಸ್ ಬಿ ಜಯರಾಮ್ ರೈ ಅವರು ಶ್ರೀಗಳಿಗೆ ಫಲಪುಷ್ಪ ನೀಡಿ ಗೌರವಿಸಲಾಯಿತು. ನಿರಂಜನ್ ಬಾವಂತ ಬೆಟ್ಟು, ನನ್ಯ ಅಚ್ಚುತ ಮೂಡೆತ್ತಾಯ, ಸಂಪಾಜೆಯ ಸೋಮಶೇಖರ್ ಕೊಯಿಂಗಾಜೆ, ಸುಲ್ಕೇರಿಮೊಗ್ರು ನವೀನ್ ಸುರಳಿಮೂಲೆ, ಮಡಂತ್ಯಾರು ಅರವಿಂದ ಜೈನ್, ಐರ್ವನಾಡು ಮನ್ಮಥ ಎಸ್ ಎನ್ ಅತಿಥಿಗಳನ್ನು ಗೌರವಿಸಿದರು. ಅನುಶ್ರೀ ಸರ್ವೆ ಪ್ರಾರ್ಥಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here