ಅ 27- ಕಾಣಿಯೂರು ಗ್ರಾ.ಪಂ ಸಭಾಭವನ ಕಟ್ಟಡ, ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ

0

ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಸಚಿವರಾದ ಎಸ್. ಅಂಗಾರ, ಶೋಭಾ ಕರಂದ್ಲಾಜೆ, ಕೋಟ ಶ್ರೀನಿವಾಸ್ ಪೂಜಾರಿ,
ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಸಂಜೀವ ಮಠಂದೂರು ಆಗಮನ

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನೂತನ ಸಭಾಭವನ ಕಟ್ಟಡ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಅ 27ರಂದು ನಡೆಯಲಿದೆ. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೋಲಾರ್ ವ್ಯವಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ವಾಣಿಜ್ಯ ಕಟ್ಟಡವನ್ನು ಉದ್ಘಾಟಿಸಲಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕುಮಾರ್, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಎಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ದರ್ಖಾಸು, ಉಪಾಧ್ಯಕ್ಷ ಗಣೇಶ್ ಉದನಡ್ಕ, ಪಿಡಿಓ ದೇವರಾಜ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here