ಪುತ್ತೂರು: ಅ.25ರಂದು ನಡೆದ ಸೂರ್ಯಗ್ರಹಣದ ವೇಳೆ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ನಡೆಯಿತು.
ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ ಮೂ ವಿ.ಎಸ್ ಭಟ್ ಮತ್ತು ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಗ್ರಹಣ ಶಾಂತಿ ಹೋಮ ನಡೆಯಿತು. ಈ ಸಂದರ್ಭದಲ್ಲಿ ವಿದ್ವಾಂಸರಾದ ಕೇಕಣಾಜೆ ಕೇಶವ ಭಟ್ ಅವರು ಗ್ರಹಣದ ಕುರಿತು ಪರಿಹಾರ ಉಪನ್ಯಾಸ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ರಾಮಚಂದ್ರ ಕಾಮತ್, ರಾಮದಾಸ್ ಗೌಡ, ಬಿ.ಐತ್ತಪ್ಪ ನಾಯ್ಕ್, ಡಾ ಸುಧಾ ಎಸ್ ರಾವ್, ವೀಣಾ ಬಿ.ಕೆ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಭಕ್ತರು ಗ್ರಹಣ ಶಾಂತಿ ಹೋಮದಲ್ಲಿ ಪಾಲ್ಗೊಂಡರು.