ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಅ.26ರಂದು ಬೆಳಿಗ್ಗೆ ಗಣಪತಿ ಹೋಮ ನೆರವೇರಿಸುವ ಮೂಲಕ ನಡೆಯಿತು.
ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ ಮೂ ವಿ.ಎಸ್ ಭಟ್ ಅವರು ಗಣಪತಿ ಹೋಮ ನೆರವೇರಿಸಿದರು. ಕಪಿಲ ದನವನ್ನು ಗೋ ಶಾಲೆಗೆ ತರುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ, ರಾಮದಾಸ್ ಗೌಡ, ರಾಮಚಂದ್ರ ಕಾಮತ್, ವೀಣಾ ಬಿ.ಕೆ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಇಂಜಿನಿಯರ್ ರಾಮಚಂದ್ರ ಘಾಟೆ, ಡಾ. ಕೃಷ್ಣಪ್ರಸಾದ್, ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು.