ಪುತ್ತೂರು: ಏಳ್ಮುಡಿಯಲ್ಲಿ ಕಾರು ಡಿಕ್ಕಿಯಾಗಿ ತಲೆಗೆ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಅಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಅ.26 ರಂದು ಮೃತಪಟ್ಟಿದ್ದಾರೆ.
ಅ.23ರಂದು ಸಾಮೆತ್ತಡ್ಕ ನಿವಾಸಿ ಮನ್ಸೆತ್ತಿ(83ವ)ರವರು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಅವರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ತಲೆಗೆ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮನ್ಸೆತ್ತಿ ಅವರು ವೀಳ್ಯದೆಲೆ ತರಲು ಪೇಟೆಗೆ ಬಂದಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ಸಂದರ್ಭದಲ್ಲಿ ಕಾರನ್ನು ಹಠತ್ ನಿಲ್ಲಿಸಿದ ಪರಿಣಾಮ ಕಾರಿನ ಹಿಂಬದಿಯಿಂದ ಸ್ಕೂಟರ್ ಕಾರಿಗೆ ಡಿಕ್ಕಿಯಾಗಿತ್ತು. ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.