ಅ.28, 29: ರಾಮಕುಂಜದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಇವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ’ಪ್ರತಿಭಾ ಕಾರಂಜಿ 2022-23’ ಅ.28 ಮತ್ತು 29ರಂದು ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಅ.28ರಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಸುಳ್ಯ ಶಾಸಕರೂ ಆದ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರರವರು ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ ಕಾರ್ಯದರ್ಶಿ ಶೇಷಪ್ಪ ರೈಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚಲನಚಿತ್ರ ನಟ ರವಿ ರಾಮಕುಂಜ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಮಾಲತಿಯವರು ಅಧ್ಯಕ್ಷತೆ ವಹಿಸಲಿದ್ದಾರೆ.

ಅ.29ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ.ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸಂಚಾಲಕ ನಾರಾಯಣ ಭಟ್, ರಾಮಕುಂಜ ಗ್ರಾ.ಪಂ.ಸದಸ್ಯರಾದ ಸೂರಪ್ಪ, ಜಯಶ್ರೀ, ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹರ್ಷಿತ್ ಕುಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

2 ಸಾವಿರ ವಿದ್ಯಾರ್ಥಿಗಳು ಸೇರುವ ನಿರೀಕ್ಷೆ:

2 ದಿನ ನಡೆಯಲಿರುವ ಪ್ರತಿಭಾ ಕಾರಂಜಿಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸುಮಾರು 2 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸ್ಪರ್ಧೆಗಳು ವೈಯಕ್ತಿಕ ಹಾಗೂ ಗುಂಪು ವಿಭಾಗಗಳಲ್ಲೂ ಇದೆ. ಅ.28ರಂದು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು ನಡೆಯಲಿದ್ದು ಬೆಳಿಗ್ಗೆ 9.30ರಿಂದ ಆರಂಭಗೊಳ್ಳಲಿದೆ. ಇದರಲ್ಲಿ ಸುಮಾರು 21 ಸ್ಪರ್ಧೆಗಳು ನಡೆಯಲಿದೆ. ಅ.29ರಂದು ಬೆಳಿಗ್ಗೆ 8.30ರಿಂದ ಸ್ಪರ್ಧೆಗಳು ಆರಂಭಗೊಳ್ಳಲಿದ್ದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಎರಡು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಕಿರಿಯ ಪ್ರಾಥಮಿಕ ವಿಭಾಗದಲ್ಲಿ 15 ಹಾಗೂ ಹಿರಿಯ ಪ್ರಾಥಮಿಕ ವಿಭಾಗದಲ್ಲಿ 17 ಸ್ಪರ್ಧೆಗಳು ನಡೆಯಲಿವೆ.

LEAVE A REPLY

Please enter your comment!
Please enter your name here