ಕಾಣಿಯೂರು ಗ್ರಾ.ಪಂ ಸಭಾಭವನ ಕಟ್ಟಡ, ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನೂತನ ಸಭಾಭವನ ಕಟ್ಟಡ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಅ 27ರಂದು ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಸಭಾಧ್ಯಕ್ಷತೆ ವಹಿಸಿದ್ದರು. ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ದರ್ಖಾಸು, ಉಪಾಧ್ಯಕ್ಷ ಗಣೇಶ್ ಉದನಡ್ಕ, ಪಿಡಿಓ ದೇವರಾಜ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here