ಅ.28-29:ಮಾಯಿದೆ ದೇವುಸ್ ಸಮೂಹ ವಿದ್ಯಾಸಂಸ್ಥೆಗಳ ಸಂಸ್ಥಾಪಕರ ದಿನದ ಪ್ರಯುಕ್ತ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಕುಗ್ರಾಮವೆನಿಸಿದ ಪುತ್ತೂರಿನಲ್ಲಿ ಅಂದು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ರಾಂತಿಯನ್ನೆಬ್ಬಿಸಲು ಕಾರಣಕರ್ತರಾಗಿರುವ ಮಾತ್ರವಲ್ಲದೆ ಶಿಕ್ಷಣ ಶಿಲ್ಪಿ ಎಂದೇ ಕರೆಯಲ್ಪಡುವ ಮೊ|ಆಂಟನಿ ಪತ್ರಾವೋರವರ ಹೆಸರಿನಲ್ಲಿ ಹಮ್ಮಿಕೊಳ್ಳಲಾಗುವ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವು ಅ.28 ಹಾಗೂ 29 ರಂದು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಐತಿಹಾಸಿಕ ಕ್ರೀಡಾಂಗಣದಲ್ಲಿ ಜರಗಲಿದೆ.

ಶುಕ್ರವಾರ ಬೆಳಿಗ್ಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಜರಗಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು/ದುಬೈ/ಯುಎಇ ಅನಿವಾಸಿ ಉದ್ಯಮಿ ಮೈಕಲ್ ಡಿ’ಸೋಜರವರು ಭಾಗವಹಿಸಲಿರುವರು. ಗೌರವ ಅತಿಥಿಗಳಾಗಿ ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ವಲೇರಿಯನ್ ಡಿ’ಸೋಜ, ಸಂತ ಫಿಲೋಮಿನಾ ಕಾಲೇಜು ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಾದ ಸಂತ ಫಿಲೋಮಿನಾ ಕಾಲೇಜು ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕಾರ್ಮಿನ್ ಪಾಯಿಸ್, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ರೋಸ್ಲಿನ್ ಲೋಬೊ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆರಿ ಡಿ’ಸೋಜ, ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಾನೆಟ್ ಡಿ’ಸೋಜ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಲೋರಾ ಪಾಯಿಸ್‌ರವರು ಭಾಗವಹಿಸಲಿದ್ದಾರೆ. ಶನಿವಾರ ಅಪರಾಹ್ನ ಸಮಾರೋಪ ಸಮಾರಂಭ ಜರಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

7 ವಿದ್ಯಾಸಂಸ್ಥೆಗಳು..

ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಾದ ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಸಂತ ಫಿಲೋಮಿನಾ ಪ್ರೌಢಶಾಲೆ, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 5 ಸಾವಿರಕ್ಕೂ ಮೇಲ್ಪಟ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆಗೈಯುತ್ತಿದ್ದು, ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಕ್ರೀಡಾಕೂಟವು ನಡೆಯಲಿದೆ. ಫಿಲೋಮಿನಾ ಕಾಲೇಜು ಕ್ಯಾಂಪಸ್ ಈ ಎರಡು ದಿನಗಳಲ್ಲಿ ಹಬ್ಬದ ವಾತಾವರಣ ಮೇಳೈಸಲಿದೆ.

ವಿಭಾಗಗಳು..

50ಮೀ ಓಟ, 100ಮೀ ಓಟ, 200ಮೀ ಓಟ, 400೦ಮೀ ಓಟ, 600ಮೀ ಓಟ, 800ಮೀ ಓಟ, 1500ಮೀ ಓಟ, 3000ಮೀ ಓಟ, 5000ಮೀ ಓಟ, ಶಾಟ್‌ಫುಟ್, ಹೈಜಂಪ್, ಲಾಂಗ್ ಜಂಪ್, ಡಿಸ್ಕಸ್ ತ್ರೋ, ರಿಲೇ ಓಟ, ಜಾವೆಲಿನ್ ತ್ರೋ, ಜ್ಯಾಮರ್ ತ್ರೋ, 10ಕಿ.ಮೀ ನಡಿಗೆ, 4ಕಿ.ಮೀ ನಡಿಗೆ, 2ಕಿ.ಮೀ ನಡಿಗೆ, ತ್ರಿಪಲ್ ಜಂಪ್ ಈ ವಿಭಾಗಗಳಲ್ಲಿ ಹಿರಿಯ-ಕಿರಿಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ನಡೆಯಲಿದೆ.

LEAVE A REPLY

Please enter your comment!
Please enter your name here