ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಕೋಟಿ ಕಂಠ ಗಾಯನ

0

ನೂಜಿಬಾಳ್ತಿಲ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನನ್ನ ನಾಡು ನನ್ನ ಹಾಡು ಸಾಮೂಹಿಕ ಗೀತ ಗಾಯನ (ಕೋಟಿ ಕಂಠ ಗಾಯನ) ಕಾರ್ಯಕ್ರಮ ನಡೆಯಿತು.

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷ ಇಮಾನ್ಯುವೆಲ್ ಪಿ.ಜೆ., ಸದಸ್ಯರಾದ ಚಂದ್ರಶೇಖರ ಗೌಡ ಹಳೆನೂಜಿ, ಉಮೇಶ್ ಎಸ್.ಜೆ., ಜೋಸೆಫ್ ಪಿ.ಜೆ., ಶ್ರೀಧರ ಗೌಡ ಗೋಳ್ತಿಮಾರ್, ವಿಜಯಲಕ್ಷ್ಮಿ ಅರಿಮಜಲು, ಉಷಾ ಗೋಳಿಯಡ್ಕ, ವಿನಯಕುಮಾರಿ ಬಳಕ್ಕ, ಆರೋಗ್ಯ ಸಹಾಯಕಿಯರು, ಆಶಾ, ಅಂಗನವಾಡಿ ಕಾರ್ಯಕರ್ತರು, ಎನ್.ಆರ್.ಎಲ್.ಎಂ., ಒಕ್ಕೂಟ ಪದಾಧಿಕಾರಿಗಳು, ಸದಸ್ಯರು, ಸ್ವ ಸಹಾಯ ಸಂಘದ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಗುರುವ ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here