ಪುತ್ತೂರು: 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಆದೇಶದಂತೆ ಒಳಮೊಗ್ರು ಗ್ರಾಮ ಪಂಚಾಯತ್‌ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಕುಂಬ್ರ ರೈತ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಹಾಗೂ ಸದಸ್ಯರುಗಳು, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್ ಹಾಗೂ ನಿರ್ದೇಶಕರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್ ಪ್ರತಿಜ್ಞಾ ವಿಧಿ ಬೋಧಿಸಿ, ಕಾರ್ಯಕ್ರಮ ನಿರ್ವಹಿಸಿದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದ್ದರು.