ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಮುಖ್ಯ ಗುರುಗಳಾದ ಜಯಮಾಲಾ ವಿ ಎನ್ ರವರು ಈ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಸಂಕಲ್ಪ ವಿಧಿಯನ್ನು ಬೋಧಿಸಿದರು. ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕನ್ನಡದ ಖ್ಯಾತ ಕವಿಗಳ ಆರು ಗೀತೆಗಳನ್ನು ಒಟ್ಟಾಗಿ ಹಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.