ಕಡಬ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ವತಿಯಿಂದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಕಡಬದ ಸಿ.ಎ.ಬ್ಯಾಂಕ್ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಂದರು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಮಾತನಾಡಿ ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ನಮ್ಮನ್ನು ನಾವು ಉಳಿಸಿಕೊಳ್ಳಬೇಕಾದರೆ ನಾಡು ನುಡಿಯ ಬಗ್ಗೆ ಅಭಿಮಾನ ಇಟ್ಟುಕೊಂಡು ದೇಶಕ್ಕೆ ಸಮರ್ಪಣೆ ಮಾಡುವ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು, ಹಾಗಾದಾಗ ನಾಡು ನುಡಿ ದೇಶ ರಕ್ಷಣೆ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಸುಳ್ಯ ಬಿ.ಜೆ.ಪಿ. ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಸನ್ನಕುಮಾರ್ ಪುತ್ರಬೈಲು ನೇತೃತ್ವದ ತಂಡದವರಿಂದ ಕನ್ನಡ ಗಾಯನ ನಡೆಯಿತು. ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಪ್ರಕಾಶ್ ಎನ್.ಕೆ ಪ್ರತಿಜ್ಞಾವಿಧಿ ಭೋಧಿಸಿದರು. ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಬಿಜೆಪಿ ಕಾರ್ಯದರ್ಶಿ ಇಂದಿರಾ ಬಿ.ಕೆ, ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಸುಭದಾ ಎಸ್ ರೈ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಪಪ್ಪ ಗೌಡ, ಬಿಜೆಪಿ ಮುಖಂಡರಾದ ಗಿರೀಶ್ ಎ.ಪಿ ಕಡಬ, ಧರ್ಮಪಾಲ ರಾವ್ ಕಜೆ, ಪ್ರದೀಪ್ ರೈ ಮನವಳಿಕೆ, ಸತೀಶ್ ನಾಯಕ್ ಕಡಬ, ಸುರೇಶ್ ದೇಂತಾರು, ಕೇಶವ ಬೇರಿಕೆ, ಮೇದಪ್ಪ ಗೌಡ ಡೆಪ್ಪುಣಿ, ಸರೋಜಿನಿ ಬಿಳಿನೆಲೆ, ಶಿವಪ್ರಸಾದ್ ರೈ ಮೈಲೇರಿ, ರಘುರಾಮ ನಾಯ್ಕ್, ಜಯಂತಿ ಆರ್ ಗೌಡ, ಗಂಗಾರತ್ನ ವಸಂತ್ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಪ್ರಸ್ತಾವನೆಗೈದು ಸ್ವಾಗತಿಸಿದರು. ಕಡಬ ಸಿ.ಎ ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ ವಂದಿಸಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ ಕಾರ್ಯಕ್ರಮ ನಿರೂಪಿಸಿದರು.
(ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲ ಕಾರ್ಯಕ್ರಮ ಉದ್ಗಾಟಿಸಿದರು.: ಫೋಟೋ )