ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಕೋಟಿ ಕಂಠ ಗಾಯನ

0

ಉಪ್ಪಿನಂಗಡಿ : ನವೆಂಬರ್ 1 ರಂದು ನಡೆಯಲಿರುವ 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ .ಅ.28ರಂದು ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.

ಗಾಯನದಲ್ಲಿ ಸಂಸ್ಥೆಯ ಸುಮಾರು 1200 ವಿದ್ಯಾರ್ಥಿಗಳು, ಶಿಕ್ಷಕ – ಶಿಕ್ಷಕೇತರ ವೃಂದದವರು ಪಾಲ್ಗೊಂಡು, ನಾಡು – ನುಡಿಯ ಬಗ್ಗೆ ಅಭಿಮಾನವನ್ನು ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ, ನಾಡಿನ ಹೆಮ್ಮೆಯ ಕವಿಗಳು ರಚಿಸಿದ ಹಾಡುಗಳನ್ನು ಹಾಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ವಿದ್ಯಾದರ್ ಜೈನ್ , ಪ್ರಾಂಶುಪಾಲರು, ಉಪನ್ಯಾಸಕ ವರ್ಗ, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here