ಬೈತಡ್ಕ-ನಾಣಿಲ- ಗುಜ್ಜರ್ಮೆ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

0

ಕಾಣಿಯೂರು: ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರುಗೊಂಡ ರಾಜ್ಯ ಸರಕಾರದ ವಿಶೇಷ ಅನುದಾನ ರೂ 3 ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಬೈತಡ್ಕ- ಗುಜ್ಜರ್ಮೆ ರಸ್ತೆಯನ್ನು ನಾಣಿಲ ಜಂಕ್ಷನ್‌ನಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಬೆಳಂದೂರು ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಪುತ್ತೂರು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಶ್ರೀ ಕ್ಷೇತ್ರ ದೈಪಿಲ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರದೀಪ್ ಆರ್ ಗೌಡ, ನಾಣಿಲ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವೀರಪ್ಪ ಗೌಡ ಉದ್ಲಡ್ಡ, ಕಾಣಿಯೂರು ಗ್ರಾ.ಪಂ.ಸದಸ್ಯರಾದ ವಿಶ್ವನಾಥ ಕೊಪ್ಪ, ಕೀರ್ತಿ ಕುಮಾರಿ ಅಂಬುಲ, ಗಂಗಮ್ಮ ಗುಜ್ಜರ್ಮೆ, ತೇಜ ಕುಮಾರಿ ಉದ್ಲಡ್ಡ, ಪ್ರಮುಖರಾದ ಪ್ರದೀಪ್ ಬೊಬ್ಬೆಕೇರಿ, ಪ್ರವೀಣ್ ಕುಂಟ್ಯಾಣ, ಚಂದ್ರಕಲಾ ಜಯರಾಮ್ ಅರುವಗುತ್ತು, ಯು.ಪಿ.ರಾಮಕೃಷ್ಣ, ಧರ್ಣಪ್ಪ ಅಂಬುಲ, ವಿಶ್ವನಾಥ ಅಂಬುಲ, ಪರಮೇಶ್ವರ ಮಿಯ್ಯೊಳ್ಪೆ, ಹರೀಶ್ಚಂದ್ರ ನೀಟಡ್ಕ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಗಣೇಶ್ ಉದನಡ್ಕ ಸ್ವಾಗತಿಸಿದರು. ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ಜನಾರ್ಧನ ಗೌಡ ಕೆಳಗಿನಕೇರಿ ವಂದಿಸಿದರು. ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here