ರಾಜ್ಯ ಮಟ್ಟದ ಮಕ್ಕಳ ಸಂಸತ್ತಿನಲ್ಲಿ ಪ್ರತಿನಿಧಿಸಲು ದ.ಕ.ಜಿಲ್ಲೆಯಿಂದ ಕೊಂಬೆಟ್ಟು ಪ್ರೌಢಶಾಲಾ ವಿದ್ಯಾರ್ಥಿಗಳಿಬ್ಬರು ಆಯ್ಕೆ

0

ಪುತ್ತೂರು: ರಾಜ್ಯ ಮಟ್ಟದ ಮಕ್ಕಳ ಸಂಸತ್ತಿನಲ್ಲಿ ಪ್ರತಿನಿಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರು ಕೊಂಬೆಟ್ಟು ಸ.ಪ.ಪೂ ಕಾಲೇಜು ಪ್ರೌಢಶಾಲೆ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.


ಮಂಗಳೂರಿನಲ್ಲಿ ಅ.೨೮ರಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ಸಂಸತ್ತು ಸ್ಪರ್ಧೆಯಲ್ಲಿ ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ೧೦ನೇ ತರಗತಿಯ ಜೀವನ್ ಎನ್ ಹಾಗೂ ೯ನೇ ತರಗತಿಯ ಪ್ರಣಮ್ಯ ಇವರು ಭಾಗವಹಿಸಿದ್ದ ಸಂದರ್ಭದಲ್ಲಿ ಅವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಂಸತ್ತಿನಲ್ಲಿ ಹಾಗೂ ಮಾನ್ಯ ಮುಖ್ಯಮಂತ್ರಿಯವರೊಡನೆ ನೇರ ಸಂವಾದ ನಡೆಸಲು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಉಪಪ್ರಾಂಶುಪಾಲರಾದ ವಸಂತ ಮೂಲ್ಯ ಇವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here