ಜಿಲ್ಲೆಯ ಅಭಿವೃದ್ಧಿಗೆ ಪತ್ರಕರ್ತರ ರಚನಾತ್ಮಕ ಸಲಹೆ, ಸಹಕಾರ ಸದಾ ಸ್ಮರಣೀಯ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

0

ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಡಾ.ರಾಜೇಂದ್ರ ಅವರಿಗೆ ಸನ್ಮಾನ

ಮಂಗಳೂರು: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ರಚನಾತ್ಮಕ ಸಲಹೆ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನೀಡಿದ ನೆರವನ್ನು ಮರೆಯಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಗೊಂಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅ.29ರಂದು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ಜನರಿಗೆ ನೆರವು ನೀಡುವ ಮನೋಭಾವ,ಕಾಳಜಿ ಇರುವ ಪತ್ರಕರ್ತರನ್ನು ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನು ನೋಡಿದ್ದೇನೆ. ಈ ಮನೋಭಾವ ದಿಂದಾಗಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಕರ್ತರು ಅಧಿಕಾರಿಗಳ ಜೊತೆಯಲ್ಲಿ ಗ್ರಾಮ ವಾಸ್ತವ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತನಗೆ ಸ್ಪೂರ್ತಿ ನೀಡಿದ್ದಾರೆ. ಇತ್ತೀಚೆಗೆ ಮಂಡೆಕೋಲಿನಲ್ಲಿ ನಡೆದ ಗ್ರಾಮವಾಸ್ತವ್ಯ ಅತ್ಯಂತ ಖುಷಿ ಕೊಟ್ಟ ಮತ್ತು ಸದಾ ನೆನಪಿನಲ್ಲಿಡುವ ಕಾರ್ಯಕ್ರಮವಾಗಿತ್ತು ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಾದರಿಯಾಗಿದೆ. ಪತ್ರಕರ್ತರ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಾಧ್ಯವಾಗದಿದ್ದರೂ ತಿಂಗಳಲ್ಲಿ ಕನಿಷ್ಠ ಒಂದು ಕಾರ್ಯಕ್ರಮದಲ್ಲಾದರೂ ಭಾಗಿಯಾಗುತ್ತಿದ್ದೆ ಎಂದು ಅವರು ಹೇಳಿದರು. ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾಡಳಿತಕ್ಕೆ ರಚನಾತ್ಮಕ ಸಲಹೆ ,ಸಹಕಾರ ನೀಡುವ ಮೂಲಕ ಜನರ ಜೊತೆ ಹೆಚ್ಚು ಕೆಲಸ ಮಾಡಲು ಸಹಕಾರಿಯಾಗಿದೆ ಈ ನಿಟ್ಟಿನಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಪತ್ರಕರ್ತರನ್ನು ಡಾ.ರಾಜೇಂದ್ರ ನೆನಪಿಸಿಕೊಂಡರು.

ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಸಹಾಯ ದೊರೆತಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಜನತೆ,ವಿವಿಧ ಸಂಘ ಸಂಸ್ಥೆಗಳು ಅಧಿಕಾರಿಗಳು ನೀಡಿದ ಸಹಕಾರ ವನ್ನು ಮರೆಯಲು ಸಾಧ್ಯವಿಲ್ಲ ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಡಾ.ರಾ ಜೇಂದ್ರ ಕೆ.ವಿ. ಹೇಳಿದರು. ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಅವರು ಡಾ.ರಾಜೇಂದ್ರ ಅವರನ್ನು ಸನ್ಮಾನಿಸಿದರು.

ಸಮಾರಂಭದಲ್ಲಿ ಪ್ರಭಾರ ಜಿಲ್ಲಾಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ ,ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ,ಮನಪಾ ಆಯುಕ್ತ ಅಕ್ಷಯ್ ಶ್ರೀಧರ್,ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್,ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್ , ಡಿಸಿಎಫ್ ದಿನೇಶ್ ಕುಮಾರ್,ಡಿಸಿಪಿ ಅಂಶುಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here