ಕಡಬ, ಅ.30. ಕಾರು ಹಾಗೂ ಜೀಪ್ ನಡುವೆ ಢಿಕ್ಕಿ

0

ಕಡಬ:  ಅ.30ರಂದು ಕಾರು ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದೆ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ  ಬೆಳಿಗ್ಗೆ ನಡೆದಿದೆ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಆಗಮಿಸುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಹ್ಯುಂಡೈ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here