ಬಂಟ್ವಾಳ: ಎರಡು ವರ್ಷಗಳ ಹಿಂದೆ ನಡೆದ ಅಕ್ರಮ ಗಾಂಜಾ ಮಾರಾಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಕನ್ಯಾನ ಗ್ರಾಮದ ಪೋಯ್ಯಗದ್ದೆ ನಿವಾಸಿ ಮಹಮ್ಮದ್ ಆಸಿಫ್ ಬಂಧಿತ ಆರೋಪಿ. 2020ರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಗೆ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ನೇತೃತ್ವದ ತಂಡ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿತ್ತು. ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಸಿಫ್ ಬಂಧನಕ್ಕೆ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಎಸ್ .ಐ.ಸಂದೀಪ್ ನೇತೃತ್ವದಲ್ಲಿ ಎಎಸ್‌ಐ ಜಯರಾಮ್ ಮತ್ತು ಸಿಬ್ಬಂದಿಗಳು ಆರೋಪಿಯನ್ನು ಆತನ ಮನೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ೧೫ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.