ಸುಬ್ರಹ್ಮಣ್ಯ ಗ್ರಾ.ಪಂ. ಉಪಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎನ್.ಎಸ್. ಗೆಲುವು

0

ಕಡಬ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ಕಡಬ ತಾಲೂಕು ಕಚೇರಿಯಲ್ಲಿ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎನ್.ಎಸ್. 69 ಮತಗಳಿಂದ ಗೆದ್ದುಕೊಂಡಿದ್ದಾರೆ.

ಈ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ದಿನೇಶ್ ರಾವ್ ಅವರ ಅಕಾಲಿಕ ನಿಧನದಿಂದ ಸ್ಥಾನ ತೆರವುಗೊಂಡಿತ್ತು. ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಜೇಶ್ ಎನ್.ಎಸ್. ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ರಾವ್ ಕಣದಲ್ಲಿದ್ದರು. ಚುನಾವಣೆಯಲ್ಲಿ ರಾಜೇಶ್ 276 ಮತಗಳನ್ನು, ಸುಬ್ರಹ್ಮಣ್ಯ ರಾವ್ 207 ಮತಗಳನ್ನು ಪಡೆದರು. ರಾಜೇಶ್ ಗೆಲುವು ಸಾಧಿಸಿದರು. 8 ಅಸಿಂಧು ಮತಗಳಾಗಿದ್ದವು.

LEAVE A REPLY

Please enter your comment!
Please enter your name here