ನೆಲ್ಯಾಡಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಹಮ್ಮಿಕೊಂಡಿರುವ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ಕೆಂಪೇಗೌಡ ರಥಕ್ಕೆ ಅ.30ರಂದು ನೆಲ್ಯಾಡಿ ಗ್ರಾ.ಪಂ.ನಲ್ಲಿ ಸ್ವಾಗತ ಕೋರಲಾಯಿತು.
ಬೆಳಿಗ್ಗೆ 10 ಗಂಟೆಗೆ ನೆಲ್ಯಾಡಿ ಗ್ರಾ.ಪಂ.ಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ನೆಲ್ಯಾಡಿ, ಕೌಕ್ರಾಡಿ, ಶಿರಾಡಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾಗತ ಕೋರಲಾಯಿತು. ಮಹಿಳೆಯರ ಪೂರ್ಣಕುಂಭ ಸ್ವಾಗತದೊಂದಿಗೆ ರಥವನ್ನು ಬರಮಾಡಿಕೊಂಡರು.
ಕಡಬ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ, ತಹಶೀಲ್ದಾರ್ ರಮೇಶ್ ಬಾಬು, ಉಪತಹಶೀಲ್ದಾರ್‌ಗಳಾದ ಗೋಪಾಲಕೃಷ್ಣ, ಮನೋಹರ್, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೆ ಚೇತನಾ, ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಪಿಡಿಒ ಮಂಜುಳ ಎನ್., ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷೆ ವನಿತಾ, ಪಿಡಿಒ ಮಹೇಶ್, ಪುತ್ತೂರು ಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಜಿ.ಪಂ.ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಸರ್ವೋತ್ತಮ ಗೌಡ, ಕಡಬ ತಾಲೂಕು ಪಂಚಾಯತ್‌ನ ವ್ಯವಸ್ಥಾಪಕ ಭುವನೇಂದ್ರ ಕುಮಾರ್, ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.