ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫ್ರೆಶರ್ಸ್ ಡೇ

0

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಪದವಿ ತರಗತಿಗಳಿಗೆ ಸ್ವಾಗತಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ, ಬೇರೆ ಬೇರೆ ಪ್ರದೇಶಗಳಿಂದ ತಮ್ಮ ಸಂಸ್ಥೆಗೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಸ್ವಾಗತಿಸಿ ನಮ್ಮ ಸಂಸ್ಥೆಯಲ್ಲಿ ಸೇರ್ಪಡೆಗೊಂಡು ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳೂ ಒಂದಾಗಿ ಬೆರೆತು ಶಿಸ್ತು ಹಾಗೂ ಸಮಯಪ್ರಜ್ಞೆಯನ್ನು ತಮ್ಮದಾಗಿಸಿಕೊಂಡು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸವನ್ನು ಪೂರೈಸುವಂತೆ ಸಲಹೆ ನೀಡಿದರು. ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಆಡಳಿತಾಧಿಕಾರಿಗಳ ಸಂಪೂರ್ಣ ಸಹಕಾರವಿದೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಕೌಶಲ ಬೆಳೆದು ಕಠಿಣ ಪರಿಶ್ರಮದಿಂದ ಓದಿದಾಗ ಮಾತ್ರ ತಮ್ಮ ಗುರಿಯನ್ನು ಮುಟ್ಟಲು ಸಾಧ್ಯ ಎಂದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾರಾಯಣ ಮೂರ್ತಿ ಸಂಸ್ಥೆಯ ರೀತಿ ರಿವಾಜುಗಳ ಪರಿಚಯವನ್ನು ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸಂಸ್ಥೆಯ ಉಪಪ್ರಾಂಶುಪಾಲರಾದ ಶೇಷಗಿರಿ. ಎಂ ಉಪಸ್ಥಿತರಿದ್ದರು.  ವಿದ್ಯಾರ್ಥಿಗಳಾದ ಕೌಶಲ್ಯ ಕೆ ಸ್ವಾಗತಿಸಿ ಶಮೀರ್ ವಂದಿಸಿದರು. ಗಾಯತ್ರಿಯವರ ಪ್ರಾರ್ಥಿಸಿದರು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here