ಉಪ್ಪಿನಂಗಡಿ : ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀರಾಮ ಶಾಲೆ ವೇದಶಂಕರನಗರ ಇಲ್ಲಿನ ಆಡಳಿತ ಮಂಡಳಿಯ ಸದಸ್ಯ ಜಯಂತ ಪೊರೋಳಿ ಧ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು.
ಕನ್ನಡ ನಾಡು ನುಡಿಯ ಕುರಿತಂತೆ ಏರ್ಪಡಿಸಿದ ಕವನ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ತಮ್ಮ ಕವನಗಳನ್ನುವಾಚಿಸಿದರು. ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 10ನೇ ತರಗತಿಯ ವಿದ್ಯಾರ್ಥಿನಿ ಮನಸ್ವಿ ಜೈನ್ ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಕುರಿತ ಸಮೂಹ ಗೀತೆಗಳ ಗಾಯನ ನಡೆಯಿತು. ಸಂಸ್ಥೆಯ ಚಿತ್ರಕಲಾ ಶಿಕ್ಷಕ ಸದಾಶಿವ ಶಿವಗಿರಿ ಕಲ್ಲಡ್ಕ ಇವರು ರಚಿಸಿ ನಿರ್ದೇಶಿಸಿದ ಆರೋಗ್ಯ ಬೇಕು ಎಂಬ ವಿಜ್ಞಾನ ನಾಟಕ ಪ್ರದರ್ಶನಗೊಂಡಿತು.
ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್. ಕೆ ಪ್ರಕಾಶ್, ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್, ಉಪನ್ಯಾಸಕ ವೃಂದ ಹಾಗೂ ಶಿಕ್ಷಕ – ಶಿಕ್ಷಕೇತರ ವೃಂದವರು ಉಪಸ್ಥಿತರಿದ್ದರು. 8ನೇ ತರಗತಿಯ ನೈನಿಕಾ, 9ನೇ ತರಗತಿಯ ಮನ್ವಿತ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.