ಅಕ್ಷಯ ಕಾಲೇಜಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಸಮಾರಂಭ

0

ಪುತ್ತೂರು: ಪುತ್ತೂರು ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ನ.1ರಂದು ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳಿಗೆ ರಾಜ್ಯೋತ್ಸವ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಭವ್ಯಶ್ರೀ ಮಾತನಾಡುತ್ತಾ, ಇತರ ಭಾಷೆಗಳಿಗೆ ಗೌರವಿಸಿ ಕನ್ನಡ ಭಾಷೆಯನ್ನು ಬೆಳೆಸಿ, ಉಳಿಸುವ ಕಾರ್ಯ ವಿದ್ಯಾರ್ಥಿಗಳಿಂದ ನಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅತಿಥಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಂದ ಕನ್ನಡಾಂಬೆಗೆ ಪುಪ್ಪಾರ್ಚಾನೆಗೈದರು.
ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ ಕೆ ಉಪಸ್ಥಿತರಿದ್ದರು. ಕು.ಪ್ರಣಮ್ಯ ಸಿ.ಎ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಹಸ್ತಿಕ್ ವಂದಿಸಿದರು.

LEAVE A REPLY

Please enter your comment!
Please enter your name here