ನಿಡ್ಪಳ್ಳಿ ಶಾಲೆಯಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಆಚರಣೆ

0

ನಿಡ್ಪಳ್ಳಿ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿಯಲ್ಲಿ ನ.1 ರಂದು 67 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.
 ಎಸ್.ಡಿ.ಎಂ.ಸಿ ಅಧ್ಯಕ್ಷ ಕರುಣಾಕರ ರೈ ಮುಂಡೂರು ಕನ್ನಡ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಪುಷ್ಪಾರವರು ಕನ್ನಡ ಭಾಷೆ ಮತ್ತು ಕನ್ನಡ ನಾಡು ನುಡಿಯ ಬಗ್ಗೆ ಮಾತನಾಡಿದರು.ಅತಿಥಿ ಶಿಕ್ಷಕಿ ಸುಮಾ.ಡಿ ಸ್ವಾಗತಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಹೇಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಶಿಕ್ಷಕಿ ಪವಿತ್ರ.ಜಿ ವಂದಿಸಿದರು.ಜ್ಞಾನ ದೀಪ ಶಿಕ್ಷಕಿ ಕುಸುಮ.ಸಿ.ಎಚ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶಾಲಿನಿ, ಅಕ್ಷರ ದಾಸೋಹ ಸಿಬ್ಬಂದಿ ಕಾವೇರಿ, ಅಂಗನವಾಡಿ ಸಹಾಯಕಿ ಜಯಲಕ್ಷ್ಮಿ.ಕೆ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಪಾಲ್ಗೊಂಡರು.

LEAVE A REPLY

Please enter your comment!
Please enter your name here